ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇವತ್ತೇ ಫೈನಲ್‌: ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

WhatsApp Group Join Now
Telegram Group Join Now

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ನಾಯಕರು ತೀವ್ರ ಕಸರತ್ತು ಮಾಡುತ್ತಿದ್ದಾರೆ. ಸುದೀರ್ಘ ಮಾತುಕತೆ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳಿಸಲಾಗಿದೆ. ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, 28 ಲೋಕಸಭಾ ಕ್ಷೇತ್ರಗಳ ಬಗ್ಗೆಯೂ ಹೈಕಮಾಂಡ್ ನಾಯಕರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆದರೆ ಸದ್ಯಕ್ಕೆ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲಾಗಿಲ್ಲ. ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತಿದ್ದು, ಇಂದು ಬಹುತೇಕ ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.

ಇನ್ನು, ಈ ಬಾರಿ ಚುನಾವಣೆಯಲ್ಲಿ ಹಿರಿಯರು, ಕೇಂದ್ರ ಸಚಿವರಿಗೆ ಟಿಕೆಟ್ ಕೈ ತಪ್ಪುತ್ತಾ ಎಂಬ ಪ್ರಶ್ನೆಗೆ ಬಿಎಸ್‌ವೈ ಉತ್ತರಿಸಿದ್ದಾರೆ. ಸದ್ಯ ಆ ರೀತಿಯಾಗಿ ಏನೂ ಚರ್ಚೆಯಾಗಿಲ್ಲ. ಕರ್ನಾಟಕದಲ್ಲಿ ಜೆಡಿಎಸ್‌ಗೆ ಸೀಟು ಬಿಟ್ಟು ಕೊಡುವ ಬಗ್ಗೆಯೂ ಯಾವುದೇ ಚರ್ಚೆ ಆಗಿಲ್ಲ. ಎರಡರಿಂದ ಮೂರು ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟು ಕೊಡಬಹುದು ಎಂದು ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

WhatsApp Group Join Now
Telegram Group Join Now
Back to top button