ನವಿಲುತೀರ್ಥ ಜಲಾಶಯ: ಜನ-ಜಾನುವಾರಗಳಿಗೆ ಕುಡಿಯುವುದಕ್ಕಾಗಿ ನೀರು ಬಿಡುಗಡೆ ಮಾಡಲು ಆದೇಶ

WhatsApp Group Join Now
Telegram Group Join Now

ಧಾರವಾಡ: 2023 ನೇ ಸಾಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಯ ಮೂಲಕ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಜನವರಿ 22 ರಂದು ಸಾಯಂಕಾಲ 6 ಗಂಟೆಯಿಂದ ಫೆಬ್ರವರಿ 1, 2024ರ ವರೆಗೆ ನೀರನ್ನು ಕಾಲುವೆಗೆ ಬಿಡಲು ಆದೇಶಿಸಿರುತ್ತಾರೆ.

 

ಬಿಡುಗಡೆಗೊಳಿಸಿದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಿಡುಗಡೆ ಮಾಡಲಾಗಿದ್ದು, ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸುವಂತೆ ಪ್ರಾದೇಶಿಕ ಆಯುಕ್ತರ ವಿನಂತಿಸಿದ್ದಾರೆ.

ಈ ಸಮಯದಲ್ಲಿ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಸಾರ್ವಜನಿಕರು ಸದರ ನೀರನ್ನು ಕೃಷಿ ಹಾಗೂ ಇನ್ನಿತರೆ ಬೇರೆ ಯಾವುದೇ ಉದ್ದೇಶಕ್ಕೆ ಪಂಪಸೆಟ್‍ನಿಂದ ಹಾಗೂ ಇನ್ನಿತರೇ ಉಪಕರಣಗಳಿಂದ ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಈ ಪ್ರದೇಶದಲ್ಲಿ ಈಗಾಗಲೇ ಸಿ.ಆರ್.ಪಿ.ಸಿ. 1973 ರ ಕಲಂ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.ನಿಬರ್ಂಧವನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ಅಂತಹ ಪಂಪಸೆಟ್ ಹಾಗೂ ಇತರೆ ಉಪಕರಣಗಳನ್ನು ಜಪ್ತಿ ಮಾಡಿಕೊಳ್ಳಲಾಗುವುದು ಹಾಗೂ ನಿಬರ್ಂಧವನ್ನು ಉಲ್ಲಂಘಿಸಿದವರ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಧಾರವಾಡ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Back to top button