ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ; ಸರ್ಕಾರದಿಂದ ಸುಗ್ರೀವಾಜ್ಞೆ

WhatsApp Group Join Now
Telegram Group Join Now

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

ವ್ಯಾಪಾರಿ ಮಳಿಗೆಗಳು, ಅಂಗಡಿ ಮುಂಗಟ್ಟು, ಹೋಟೆಲ್ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು. ಜಾಹೀರಾತು, ಸೂಚನಾ ಫಲಕಗಳು, ಬ್ಯಾನರ್ ಗಳು ಸೇರಿದಂತೆ ಎಲ್ಲದರಲ್ಲಿಯೂ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಗಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗಾಗಿ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುತ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ನಿರ್ಧಾರಕ್ಕೆ ರಾಜ್ಯಪಾಲರ ಅನುಮೋದನೆ ಸಿಕ್ಕ ಬಳಿಕ ತಿದ್ದುಪಡಿ ನಿಯಮ ಜಾರಿಯಾಗಲಿದೆ.

WhatsApp Group Join Now
Telegram Group Join Now
Back to top button