5 ಲಕ್ಷ ಲಂಚಕ್ಕೆ ಬೇಡಿಕೆ; ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Karnataka Lokayukta) ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು (License Renewal) 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ.3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ರೆಂಡ್ ಆಯಂಡ್ ಆಗಿ ಹಿಡಿದಿದ್ದಾರೆ.

 

ನರಸಿಂಹಮೂರ್ತಿ ಎಂಬ ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್​ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ಪಿಡಿಒನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಆವರಣದಲ್ಲಿ ಅಧಿಕಾರಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ಪಿಡಿಒರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ಎಸ್​ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

WhatsApp Group Join Now
Telegram Group Join Now
Back to top button