ಲೋಕಸಭಾ ಚುನಾವಣೆ: ಬೆಳಗಾವಿಗೆ ಮೃಣಾಲ್-ಚಿಕ್ಕೋಡಿಗೆ ಪ್ರಿಯಾಂಕಾ ಬಹುತೇಕ ಟಿಕೆಟ್ ಫಿಕ್ಸ್‌..? ಬಿಜೆಪಿ ಹಿಡಿತ ತಪ್ಪಿಸಲು ಕಾಂಗ್ರೆಸ್‌ ನೂತನ ತಂತ್ರ-ಸಚಿವರ ಮಕ್ಕಳ ಸ್ಪರ್ಧೆಗೆ ಹೆಚ್ಚಿದ ಒತ್ತಡ

WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಡಿತ ತಪ್ಪಿಸಿ ಕಾಂಗ್ರೆಸ್‌ ಪಾರುಪತ್ಯೆ ಮೆರೆಯಲು ತಂತ್ರ ರೂಪಿಸಿರುವ ರಾಜ್ಯ ಕಾಂಗ್ರೆಸ್‌ ಇಬ್ಬರು ಅಭ್ಯರ್ಥಿಗಳನ್ನು ಒಮ್ಮತದಿಂದ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಹೌದು…. ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಟಿಕೆಟ್‌ಗಾಗಿ ಹಲವು ಕಾಂಗ್ರೆಸ್‌ ಮುಖಂಡರು ಹಾಗೂ ಹಲವು ಹೊಸ ಮುಖಗಳು ನಡೆಸುತ್ತಿರುವ ಲಾಬಿಗೆ ತೆರೆ ಬಿದ್ದಿರುವ ಬಗ್ಗೆ ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇವೆರಡು ಲೋಕಸಭಾ ಕ್ಷೇತ್ರಗಳಿಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಮಧ್ಯೆ ಟಿಕೆಟ್ ಲಾಭಿ ನಡೆದಿದ್ದು, ಅಂತಿಮವಾಗಿ ಚಿಕ್ಕೋಡಿ ಕ್ಷೇತ್ರದಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ  ಅವರು ಒಮ್ಮತದ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

2 ಕ್ಷೇತ್ರ ಮರಳಿ ಪಡೆಯಲು ಕೈ ತಂತ್ರ: ಇತ್ತ ಬೆಳಗಾವಿ ಕ್ಷೇತ್ರದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್  ಸ್ಪರ್ಧೆಯನ್ನು ಅಂತಿಮಗೊಳಿಸಲಾಗಿದೆ. ಸದ್ಯ ಇದನ್ನು ವರಿಷ್ಠರಿಗೆ ಶಿಫಾರಸು ಮಾಡಲಾಗಿದ್ದು, ಕಾಂಗ್ರೆಸ್ ಮುಖ್ಯಸ್ಥರು ಅಧಿಕೃತಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 2 ಕ್ಷೇತ್ರ ಮರಳಿ ಪಡೆಯಲು ಕಾಂಗ್ರೆಸ್ ತಂತ್ರಈ ಮೂಲಕ ಬಿಜೆಪಿಯ ಪಾಲಾಗಿರುವ ಎರಡು ಭದ್ರಕೋಟೆಯನ್ನು ಮರಳಿ ಪಡೆಯಲು ಕಾಂಗ್ರೆಸ್ ಅಂತಿಮವಾಗಿ ಈ ಭಾಗದ ಪ್ರಭಾವಿ ನಾಯಕರಾದ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ಅವರನ್ನು ಅವಲಂಬಿಸಿದಂತಾಗಿದೆ. ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಟಿಕೆಟ್ ಹಂಚಿಕೆ, ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸ್ಥಳೀಯ ಕಾಂಗ್ರೆಸ್ ನಾಯಕರು ಕ್ರಮವಾಗಿ ಕೈಗೊಂಡಿದ್ದಾರೆ.

2 ಕ್ಷೇತ್ರಕ್ಕೆ ಹಾಲಿ ನಾಯಕರ ಪುತ್ರರೇ ಫೈನಲ್: ಈ ಬಗ್ಗೆ ಪಕ್ಷದ ಹೈಕಮಾಂಡ್‌ ಅಂತಿಮ ತೀರ್ಮಾನ ಹೊರಡಿಸಬೇಕಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.  2 ಕ್ಷೇತ್ರಕ್ಕೆ ಹಾಲಿ ನಾಯಕರ ಪುತ್ರರೇ ಫೈನಲ್? ಅಲ್ಲದೇ ಈ ಎರಡು ಕ್ಷೇತ್ರಗಳಿಂದ ಎರಡು ರಾಜಕೀಯ ಕುಟುಂಬದ ಸದಸ್ಯರನ್ನು ಬಿಟ್ಟು ಬೇರೆ ಯಾರನ್ನೂ ಕಾಂಗ್ರೆಸ್ ಕಣಕ್ಕಿಳಿಸುವುದಿಲ್ಲ ಎಂಬ ಮಾತುಗಳಿಗೆ ಪುಷ್ಠಿ ಸಿಕ್ಕಂತಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಸಾಮರ್ಥ್ಯ ಹೊಂದಿರುವ ನಾಯಕರ ಇವರು ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್ ವರಿಷ್ಠರಿಗೆ ಈ ಬಗ್ಗೆ ಒತ್ತಾಯಿಸಲಾಗಿದೆ ಎನ್ನಲಾಗಿದೆ. ಮೃಣಾಲ್ ಮತ್ತು ಪ್ರಿಯಾಂಕಾ ಅವರನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸುವುದು ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಿದಂತಾಗುತ್ತದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಸಿಎಂ-ಡಿಸಿಎಂ ಚರ್ಚೆ:  ಸಚಿವ ಜಾರಕಿಹೊಳಿ ಹೇಳಿದ್ದೇನು? ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ ವೇಳೆ ತಮ್ಮ ಮಗಳನ್ನು ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಡುವ ನಿರ್ಧಾರಕ್ಕೆ ಸತೀಶ್ ಜಾರಕಿಹೊಳಿ ಅವರು ಒಪ್ಪಿಗೆ ಸೂಚಿಸಿದ್ದರು. ಈ ಬಗ್ಗೆ ಚಿಕ್ಕೋಡಿ ನಾಯಕರ ಜತೆಗೆ ಚರ್ಚಿಸಿ ತಿಳಿಸುವುದಾಗಿ ಸತೀಶ್ ಅವರು ಸಿಎಂ ಹಾಗೂ ಡಿಸಿಎಂಗೆ ಹೇಳಿದ್ದರು.  ಸದ್ಯ ಕರ್ನಾಟಕ ಕಾಂಗ್ರೆಸ್ ನಾಯಕರು ಎರಡು ಕ್ಷೇತ್ರಗಳಿಂದ ಮೃಣಾಲ್ ಮತ್ತು ಪ್ರಿಯಾಂಕಾ ಅವರನ್ನು ಅಂತಿಮ ಅಭ್ಯರ್ಥಿಗಳನ್ನಾಗಿ ಮಾಡಿದ್ದು, ಈ ಬಗ್ಗೆ ಅಧಿಕೃತವಾಗಿ ಹೈಕಮಾಂಡನಿಂದ ಉತ್ತರ ಬರಬೇಕಿದೆ.

WhatsApp Group Join Now
Telegram Group Join Now
Back to top button