ಪ್ರಿಯಂಕಾ ಜಾರಕಿಹೊಳಿ ಗೆಲುವು ನಿಶ್ಚಿತ: ಶಾಸಕ ಸವದಿ

WhatsApp Group Join Now
Telegram Group Join Now

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕುಮಾರಿ ಪ್ರಿಯಂಕಾ ಜಾರಕಿಹೊಳಿ ಯವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ನಿಟ್ಟಿನಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 20 ಸ್ಥಾನಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಗೆಲುವು ನಿಶ್ಚಿತ ಶಾಸಕ ಲಕ್ಷ್ಮಣ ಸವದಿ ಭವಿಷ್ಯ ನುಡಿದರು.

 

ಅಥಣಿ ಪಟ್ಟಣದ ಸೋಶಿಯಲ್ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಪ್ರಿಯಂಕಾ ಜಾರಕಿಹೊಳಿ ಅವರ ಪರ ಪ್ರಚಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಚುನಾವಣೆ ಬಂದಾಗ ಮಾತ್ರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಜನರ ದಿಕ್ಕ ತಪ್ಪಿಸುವಂತಹ ಕೆಲಸ ಮಾಡುತ್ತಾ ಬಂದಿದೆ. ಕಾರ್ಯಕರ್ತರು ಬಿಜೆಪಿಯ ಸುಳ್ಳು ಭರವಸೆಗಳಿಗೆ ಮೋಸ ಹೋಗದೆ. ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕುಮಾರಿ ಪ್ರಿಯಂಕಾ ಜಾರಕಿಹೊಳಿ ಯವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ನಿಟ್ಟಿನಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 20 ಸ್ಥಾನಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಗೆಲುವು ನಿಶ್ಚಿತ ಶಾಸಕ ಲಕ್ಷ್ಮಣ ಸವದಿ ಭವಿಷ್ಯ ನುಡಿದರು.

ಇದೆ ಸಮಯದಲ್ಲಿ ಚಿದಾನಂದ ಸವದಿ,ಸದಾಶಿವ ಬುಟಾಳಿ, ಮಹಾಂತೇಶ ಠಕ್ಕನ್ನವರ ಶಿವಾನಂದ ದಿವಾನಮಾಳ,ಶಿವು ಗುಡ್ಡಾಪೂರ, ಅಸ್ಲಂ ನಾಲಬಂದ, ಸುರೇಶ ಮಾಯಣ್ಣವರ,ಅಮೋಘ ಕೊಬ್ರಿ,ಸಿದ್ದಾರ್ಥ ಶಿಂಗೆ, ನ್ಯಾಯವಾದ ಕಲ್ಲಪ್ಪ ವಣಜೋಳ, ಸುಶೀಲಕುಮಾರ ಪತ್ತಾರ ಶ್ಯಾಮ ಪೂಜಾರಿ,ರೇಖಾ ಪಾಟೀಲ,ಹಾಗೂ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಪುರಸಭೆ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು, ಅನೇಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Back to top button