ವೇಶ್ಯಾವಾಟಿಕೆ ದಂಧೆ: ಶಿವಮೊಗ್ಗದಲ್ಲಿ ಮನೆ ಮೇಲೆ ದಾಳಿ, ಐವರ ಬಂಧನ

WhatsApp Group Join Now
Telegram Group Join Now

ಶಿವಮೊಗ್ಗ: ವೇಶ್ಯಾವಾಟಿಕೆ (Prostitution) ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದಲ್ಲಿ (shivamogga) ನಡೆದಿದೆ.

ಶಿವಮೊಗ್ಗದ ಗಾಂಧಿನಗರ ಬಡಾವಣೆಯಲ್ಲಿರುವ ಮನೆಯಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.

ದಾಳಿ ವೇಳೆ ಸ್ಥಳೀಯ ಓರ್ವ ಮಹಿಳೆ ಸೇರಿದಂತೆ ಬೆಂಗಳೂರು (bengaluru), ಮೈಸೂರಿನಿಂದ (mysore) ಬಂದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗಂಗಾಧರ್ ಎಂಬಾತ ಮೈಸೂರು, ಬೆಂಗಳೂರು ಮೊದಲಾದ ಮಹಾನಗರಗಳಿಂದ ಮಹಿಳೆಯರನ್ನು ಕರೆಸಿ ಈ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಕಳೆದ ಎರಡು ವರ್ಷಗಳಿಂದ ಇಲ್ಲಿ ವೇಶ್ಯವಾಟಿಕೆ ನಡೆಯುತ್ತಿತ್ತು. ಈ ಬಗ್ಗೆ ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಿದ್ದೇಗೌಡ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು.

ಈ ಕುರಿತು ಜಯನಗರ (jayanagara) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

WhatsApp Group Join Now
Telegram Group Join Now
Back to top button