ವಂಚನೆ ಆರೋಪ : ಪ್ರಕರಣ ರದ್ದು ಕೋರಿ ರಮೇಶ ಜಾರಕಿಹೊಳಿ ಅರ್ಜಿ

WhatsApp Group Join Now
Telegram Group Join Now

ಬೆಂಗಳೂರು: ಸಾಲ ಪಾವತಿಸದೆ ಸಹಕಾರಿ ಬ್ಯಾಂಕಿಗೆ ವಂಚನೆ ಆರೋಪ ಪ್ರಕರಣ ರದ್ದು ಮಾಡುವಂತೆ ಕೋರಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರನ್ನು ನೇಮಕ ಮಾಡಲಾಗಿದೆ.

NCLTಯಲ್ಲಿ ವಿಚಾರಣೆ ಬಾಕಿ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ರಮೇಶ ಜಾರಕಿಹೊಳಿ ಕೋರಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಶುಗರ್ ಲಿಮಿಟೆಡ್ ಕಂಪನಿಗಾಗಿ 232.82 ಕೋಟಿ ರೂ. ಸಾಲ ಪಡೆದ ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ದೂರು ನೀಡಿದ್ದು, ಇದರ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಕೇಸ್ ರದ್ದುಪಡಿಸುವಂತೆ ಅವರು ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Back to top button