ಪತ್ರಿಕೆ ವಿತರಕರಿಗೆ 3 ಲಕ್ಷದವರೆಗೆ ವಿಮೆ ಸೌಲಭ್ಯ : ಹಿಂಗೆ ನೋಂದಣಿ ಮಾಡಿಕೊಳ್ಳಿ

WhatsApp Group Join Now
Telegram Group Join Now

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಈಗಾಗಲೇ ಬಜೆಟ್ ನಲ್ಲಿ ಘೋಷಣೆಯನ್ನು ಪತ್ರಿಕಾ ವಿತರಕರಿಗೆ ವಿಮಾ ಸೌಲಭ್ಯ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಪತ್ರಿಕೆ ವಿತರಕರಿಗೆ 3 ಲಕ್ಷದವರೆಗೆ ವಿಮೆ ಸೌಲಭ್ಯವನ್ನು ಜಾರಿಗೊಳಿಸಿದ್ದಾರೆ.

ಈ ಕುರಿತಂತೆ ಕಾರ್ಮಿಕ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಪತ್ರಿಕೆ ವಿತರಿಸುವ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ‘ಇ-ಶ್ರಮ್‌’ ಪೋರ್ಟಲ್‌ ಮೂಲಕ ನೋಂದಣಿಗೆ ಸೂಚಿಸಲಾಗಿದೆ.

ದಿನಪತ್ರಿಕೆ ವಿತರಕರಿಗೆ ₹ 2 ಲಕ್ಷ ಅಪಘಾತ ಪರಿಹಾರ ಸೌಲಭ್ಯ ಮತ್ತು ₹ 1 ಲಕ್ಷದವರೆಗೆ ವೈದ್ಯಕೀಯ ಸೌಲಭ್ಯ ಸಿಗಲಿದೆ ಎಂದು ತಿಳಿಸಿದೆ.

ಒಟ್ಟಾರೆಯಾಗಿ ಪತ್ರಿಕೆ ವಿತರಕರಿಗೆ 3 ಲಕ್ಷದವರೆಗೆ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದೆ. ಅದರಲ್ಲಿ 2 ಲಕ್ಷದವರೆಗೆ ಅಪಘಾತ ಪರಿಹಾರ ಸೌಲಭ್ಯ ಹಾಗೂ 1 ಲಕ್ಷದವರೆಗೆ ವೈದ್ಯಕೀಯ ಸೌಲಭ್ಯವಿದೆ. ಈ ಯೋಜನೆಗೆ ಇ-ಶ್ರಮ ಪೋರ್ಟಲ್ ಮೂಲಕ ಪತ್ರಿಕೆ ವಿತರಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

WhatsApp Group Join Now
Telegram Group Join Now
Back to top button