ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸತೀಶ್ ಜಾರಕಿಹೊಳಿ

WhatsApp Group Join Now
Telegram Group Join Now

ಬೆಳಗಾವಿ :ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ದೇಶದಾದ್ಯಂತ ಭಾರೀ ಸುದ್ದಿಯಾಗಿದ್ದು ಹಲ್ಲೆಗೆ ಸಂಬಂಧಿಸಿದಂತೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ.ಪರಿಹಾರದ ಚೆಕ್​ ವಿತರಿಸಿದ್ದಾರೆ.

ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರದ ಚೆಕ್ ನ್ನು ವಿತರಿಸಿದ್ದಾರೆ. ‘ ಐದು ಲಕ್ಷದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ’ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ.ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ.

ಇಂತಹದೊಂದು ಘಟನೆ ಆಗಬಾರದಿತ್ತು, ಆದರೆ ನಮ್ಮ ಭಾಗದಲ್ಲಿ ಆಗಿದೆ. ಮುಂದೆ ಇಂತಹ ಘಟನೆ ಆಗದಂತೆ ಎಲ್ಲರೂ ಪ್ರಯತ್ನ ಮಾಡೋಣ ಎಂದುಸ ಚಿವ ಸತೀಶ್ ಜಾರಕಿಹೊಳಿ ಹೇಳಿದರು.

WhatsApp Group Join Now
Telegram Group Join Now
Back to top button