ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯ
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ ಹೊಡೆದ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಹೊರವಲಯದಲ್ಲಿಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್ 40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿತ್ತು. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಮರಡಿಮಠ ಗ್ರಾಮದ ಜೈ ಹನುಮಾನ್ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಮಾವನೂರ ಮೇಲ್ಮನಹಟ್ಟಿ, ಗೋಡಚಿನಮಲ್ಕಿ ಗ್ರಾಮದ ಎಲ್ ಕೆಜಿಯಿಂದ 8ನೇ ತರಗತಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣೆ ಪೋಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow Us