ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು : ಸಿದ್ದರಾಮಯ್ಯ

WhatsApp Group Join Now
Telegram Group Join Now
ಬೆಂಗಳೂರು : ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ ‘ವರ್ಷದ ವ್ಯಕ್ತಿ – ವಿಶೇಷ ವ್ಯಕ್ತಿ’ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ.

ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ ಎಂದು ಹೇಳಿದ್ದಾರೆ.

ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ದ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಡ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದರು

ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು. ಸ್ವಾತಂತ್ರ್ಯಪೂರ್ವದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

WhatsApp Group Join Now
Telegram Group Join Now
Back to top button