ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿದ ಸರ್ಕಾರ

WhatsApp Group Join Now
Telegram Group Join Now

ಬೆಂಗಳೂರು: ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ದಿಮೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿದ್ದು, ಇರದಿದ್ದರೆ, ಕ್ರಮ ಜರುಗಿಸುವ ಅಧಿಕಾರ ಸರ್ಕಾರಕ್ಕೆ ಒದಗಿದೆ.

ಈ ಉದ್ದೇಶಕ್ಕೆ, ರಾಜ್ಯ ಸರ್ಕಾರ ಮಂಡಿಸಿ ಉಭಯ ಸದನಗಳಲ್ಲೂ ಅನುಮೋದನೆ ಪಡೆದಿದ್ದ ʼಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024ʼಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಅದರ ಬೆನ್ನಲ್ಲೇ, ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

 

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲ ಸಂಸ್ಥೆಗಳಿಗೂ ಇದು ಅನ್ವಯವಾಗಲಿದೆ. ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್ಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇಕಡ 60 ರಷ್ಟು ಪ್ರದರ್ಶಿಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ.

WhatsApp Group Join Now
Telegram Group Join Now
Back to top button