WEDDING: ಪ್ರಿಯಕರನ ವಿವಾಹಕ್ಕೆ ಪೊಲೀಸರೊಂದಿಗೆ ಎಂಟ್ರಿ ಕೊಟ್ಟ ಯುವತಿ : ಆದ್ರೆ ಅಲ್ಲಿ ಆಗಿದ್ದೆ ಬೇರೆ..!
ಮಂಗಳೂರು: ಪ್ರಿಯಕರ ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಗುತ್ತಿದ್ದಕ್ಕೆ (Wedding) ಯುವತಿಯೊಬ್ಬಳು ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಬಂದು ಹೈಡ್ರಾಮಾವಾಡಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ.
ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಎಂಬಾತನ ಮದುವೆಯಲ್ಲಿ ಈ ಘಟನೆ ನಡೆದಿದೆ.
ಅಕ್ಷಯ್ ಕಳೆದ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದ. ಅದಾದ ಬಳಿಕ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಅದಾದ ಬಳಿಕ ಅಕ್ಷಯ್ ತನ್ನ ವರಸೆ ಬದಲಿಸಿದ್ದ ಎಂಬ ಆರೋಪ ಕೇಳಿ ಬಂದಿದೆ.
ಇದರಿಂದಾಗಿ ಯುವತಿಯು ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಳು. ಘಟನೆಗೆ ಸಂಬಂಧಿಸಿ ಆರೋಪಿ ಅಕ್ಷಯ್ ವಿರುದ್ಧ ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿತ್ತು. ಈ ನಡುವೆ ಅಕ್ಷಯ್ ಮಂಗಳೂರಿನ ಯುವತಿಯ ಜೊತೆ ವಿವಾಹ ನಿಶ್ಚಯವಾಗಿತ್ತು.
ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್ನಲ್ಲಿ ಅಕ್ಷಯ್‌ನ ಮದುವೆ ನಡೆಯುತ್ತಿರುವ ವಿಚಾರ ತಿಳಿದ ಮೈಸೂರಿನ ಯುವತಿ ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ. ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು.
ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.