ರಾಜ್ಯ ರಾಜಕೀಯಲ್ಲಿ ಮಹತ್ವದ ಬೆಳವಣಿಗೆ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಭೇಟಿ ಮಾಡಿದ ಜನಾರ್ದನ ರೆಡ್ಡಿ: ಚರ್ಚೆಯಾಗಿದ್ದೇನು?

WhatsApp Group Join Now
Telegram Group Join Now
ಬೆಂಗಳೂರು, ಫೆಬ್ರವರಿ 26: ಲೋಕಸಭೆ ಚುನಾವಣೆ ಎಲ್ಲಾ ಪಕ್ಷಗಳು ಈಗಿಂದಲೇ ಸಿದ್ಧತೆಯನ್ನು ನಡೆಸಿವೆ.ಇತ್ತ ನಾಳೆ ( ಫೆಬ್ರವರಿ 27) ರಂದು ರಾಜ್ಯ ಸಭೆ ಚುನಾವಣೆಗೆ ರಾಜ್ಯದಲ್ಲಿ ಮೂರು ಪಕ್ಷಗಳು ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ದು, ಅಖಾಡದಲ್ಲಿ ಐದನೇ ಅಭ್ಯರ್ಥಿ ಕಣಕ್ಕಿಳಿದಿರುವುದು ಚುನಾವಣಾ ಕಣವನ್ನು ರಂಗೇರಿಸಿದೆ.ಇತ್ತ ರಾಜ್ಯಸಭಾ ಚುನಾವಣೆ ಕಣ ರಂಗೇರಿದ್ದು, ತಮ್ಮ ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳೂ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ ಹಾಕಲು ಪ್ರಯತ್ನಗಳು ತೀವ್ರಗೊಂಡಿದೆ.
ಇದರ ಬೆನ್ನಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಸೋಮವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ‌. ರಾಜ್ಯಸಭೆ ಚುನಾವಣೆಯ ಹಿನ್ನಲೆಯಲ್ಲಿ ಸಹಜವಾಗಿ ಈ ಭೇಟಿ ಬೇರೆ ಬೇರೆ ಆಯಾಮದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಇನ್ನೂ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ಮಾಜಿ ಸಚಿವರು, ಶಾಸಕರೂ ಆದ ಜನಾರ್ಧನ ರೆಡ್ಡಿಯವರು ಮಾತುಕತೆ ನಡೆಸಿರುವ ಕುರಿತು ಹಂಚಿಕೊಂಡಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭೇಟಿ ಕುರಿತಾಗಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಜನಾರ್ದನ ರೆಡ್ಡಿ ಮಾತನಾಡಿ, ‌ಐತಿಹಾಸಿಕ ಆನೆಗೊಂದಿ ಉತ್ಸವವನ್ನ ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.ಸುಷ್ಮಾ ಸ್ವರಾಜ್ ಹುಟ್ಟುಹಬ್ಬ; ಭಾವುಕರಾಗಿ ಪೋಸ್ಟ್‌ ಹಾಕಿದ ಜನಾರ್ದನ ರೆಡ್ಡಿ ಮಾರ್ಚ್ ತಿಂಗಳಲ್ಲಿ ವೈಭವದಿಂದ ಆಚರಿಸಲಾಗುತ್ತೆ. ಈ ಸಂಬಂಧ ಸಿಎಂ,‌ಡಿಸಿಎಂಗೆ ಆಹ್ವಾನ ನೀಡಲು ಹೋಗಿದ್ದೆ ಎಂದ ಅವರು, ಸಿಎಂ, ಡಿಸಿಎಂ ಭೇಟಿ ಸಂದರ್ಭದಲ್ಲಿ ರಾಜ್ಯಸಭೆ ಚುನಾವಣೆಯ ಬಗ್ಗೆ ಚರ್ಚೆ ನಡೆದಿದ್ಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಸಭಾ ಚುನಾವಣೆಗೆ ಎಲ್ಲರೂ ಮನವಿ ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆದಿಯಾಗಿ ಎಲ್ಲ ಪಕ್ಷದವರು ಮನವಿ ಮಾಡಿದ್ದಾರೆ.‌ನಾನು ಇನ್ನು ಈ ಬಗ್ಗೆ ಏನೂ ತೀರ್ಮಾನ ಮಾಡಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.
WhatsApp Group Join Now
Telegram Group Join Now
Back to top button