ಆರೋಗ್ಯ ಇಲಾಖೆಯಿಂದ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ ಮಾರ್ಗಸೂಚಿಯಲ್ಲಿ ಏನಿದೆ?
ಬೆಂಗಳೂರು: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಹೊಸವರ್ಷ, ಕ್ರಿಸ್ ಮಸ್ ಹಾಗೂ ಚಳಿಗಾಲ ಗಮನದಲ್ಲಿಟ್ಟು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಮಾರ್ಗಸೂಚಿಯಲ್ಲಿ ಏನಿದೆ?
1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪುದೇಶಗಳಿಗೆ ತೆರಳಬೇಡಿ.
2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು.
3. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲಿಸುವುದು.
4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ, ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪುದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕು.
5. ಅಂತರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು.