ಭಾರಿ ಮಳೆ ಮುನ್ಸೂಚನೆ; 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

WhatsApp Group Join Now
Telegram Group Join Now

ರಾಜ್ಯದ ಜನ ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದು, ಮಳೆರಾಯ ಯಾವಾಗ ಬರುತ್ತಾನೊ ಎಂದು ಜನ ಎದುರು ನೋಡುತ್ತಿದ್ದಾರೆ.‌ ಆದರೆ ರಾಜ್ಯದಲ್ಲಿನ ವಿಪರೀತ ತಾಪಮಾನದಿಂದ ನರಳುತ್ತಿರುವ ಜನಕ್ಕೆ ಸ್ಪಲ್ಪಮಟ್ಟಿಗೆ ಮುಕ್ತಿ ಸಿಗುವ ಸಾಧ್ಯತೆಗಳಿಗೆ.

ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ಹಮಾನ ಇಲಾಖೆ ರಾಜ್ಯದ 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.‌ ಇಂದಿನಿಂದ 14 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ತಿಳಿಸಿದೆ.

ಯೆಲ್ಲೋ ಅಲರ್ಟ್ ಘೋಷಣೆ

ದಾವಣಗೆರೆ, ವಿಜಯನಗರ, ಬಾಗಲಕೋಟೆ, ಗದಗ, ಬೀದರ್,‌ ಹಾವೇರಿ, ರಾಯಚೂರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಎರಡು ದಿನ ಬಿಟ್ಟು, ಅಂದರೆ ಏ. 9 ರಂದು ಚಿತ್ರದುರ್ಗ, ಚಾಮರಾಜನಗರ, ದಕ್ಷಿಣ ಕನ್ನಡ, ಬೀದ‌ರ್, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now
Back to top button