20ನೇ ಸತೀಶ್ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ, ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ

WhatsApp Group Join Now
Telegram Group Join Now

ಗೋಕಾಕ: ಸತೀಶ್ ಶುಗರ್ಸ್  ಅವಾರ್ಡ್ಸ್ ಕಾರ್ಯಕ್ರಮ ಗೋಕಾಕ ನಾಡಿನ ಸಂಸ್ಕೃತಿ ಉತ್ಸವವಾಗಿ ಹೊರಹೊಮ್ಮಿದೆ ಎಂದು ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ್ ಹಂಜಾಟೆ  ಹೇಳಿದರು.

ಶುಕ್ರವಾರ ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಸತೀಶ್ ಜಾರಕಿಹೊಳಿ ಪೌಂಡೇಶನ್ ವತಿಯಿಂದ  ಜರುಗಿದ 20ನೇ ಸತೀಶ್ ಶುಗರ್ಸ್ ಅವಾರ್ಡ್ಸ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಈ ವೇದಿಕೆ ಬಹಳ ಮುಖ್ಯವಾಗಿದ್ದು, ಸತೀಶ್ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮ ಅಂತಿಮ ಹಂತದಲ್ಲಿ 700 ವಿದ್ಯಾರ್ಥಿಗಳು ಭಾಗವಹಿಸಿ ನಾಡಿನ ಕೀರ್ತಿಯನ್ನು ಹೆಚ್ಚಿಸುವ ಜೊತೆಗೆ ರಾಜ್ಯ, ರಾಷ್ಟ್ರ ಮಟ್ಟಕ್ಕೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ತೋರ್ಪಡಿಸಿ ಗೋಕಾಕ ನಗರದ ಹೆಸರನ್ನು ಉತ್ತಂಗಕ್ಕೆ ಏರಿಸಿದ್ದಾರೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಅವರು ಎಲ್ಲಾ ರಂಗದಲ್ಲಿ ಕಾರ್ಯಮಾಡಿ ರಾಜ್ಯವನ್ನು ಮುನ್ನಡೆಸುತ್ತಿರುವುದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ  25 ಲಕ್ಷಕ್ಕೂ ಹೆಚ್ಚು ರೂ. ಬಹುಮಾನದ ರೂಪದಲ್ಲಿ ನೀಡಲಾಗುತ್ತಿದ್ದು ಗೋಕಾಕ ಭಾಗದ ನಾವೆಲ್ಲರೂ ಇದರ ಸದುಪಯೋಗ ಪಡೆದುಕೊಂಡು  ಈ ಕಾರ್ಯಕ್ರಮದ ಹಿರಿಮೆ, ಗಿರಿಮೆ ಹೆಚ್ಚಿಸೋಣ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಥಮ, ದ್ವೀತಿಯ, ತೃತೀಯ ಮತ್ತು ಸಮಾಧಾನಕರ ಬಹುಮಾನವನ್ನು ಗಣ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ಯುವ ನಾಯಕರಾದ ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ,

ಸತೀಶ್ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ, ತಹಶೀಲ್ದಾರ್ ಡಾ. ಮೋಹನ ಭಸ್ಮೆ, ಡಿ.ಡಿ.ಪಿ.ಯು ಪಾಂಡುರಂಗ ಭಂಡಾರಿ, ಡಿವೈಎಸ್ಪಿ ಡಿ.ಎಚ್. ಮುಲ್ಲಾ,  ಬಿಇಒಗಳಾದ ಅಜೀತ ಮನ್ನಿಕೇರಿ, ಜಿ.ಬಿ‌.ಬಳಗಾರ , ಪ್ರಾಚಾರ್ಯ ಪಿ.ಎಂ ಲಕ್ಕಶೆಟ್ಟಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಅಪಾರ ಸಂಖ್ಯೆಯ ಸಾರ್ವಜನಿಕರುಇದ್ದರು.

WhatsApp Group Join Now
Telegram Group Join Now
Back to top button